ರಾಷ್ಟ್ರ ಸುದ್ದಿ

ಫೆಬ್ರವರಿ 1 ರಂದು ಕೇಂದ್ರ ಮಧ್ಯಂತರ ಬಜೆಟ್: ಪಿಯೂಷ್ ಗೋಯೆಲ್

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದು ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪಿಯೂಷ್ ಗೋಯೆಲ್ , ಫೆಬ್ರವರಿ 1 ರಂದು ಬಜೆಟ್ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದ್ದು, ಫೆಬ್ರವರಿ 1 ರಂದು ಆಯವ್ಯಯ ಮಂಡನೆಯಾಗಲಿದೆ.
ಜನವರಿ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂತರ ಬಜೆಟ್​ನಲ್ಲಿ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ಆದಾಯ ತೆರಿಗೆ ಮಿತಿ ದ್ವಿಗುಣಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದ್ದು, ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಮಿತಿಯನ್ನು ಸರ್ಕಾರ 5 ಲಕ್ಷ ರೂ. ಗೆ ಅಧಿಕಗೊಳಿಸಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.

About the author

ಕನ್ನಡ ಟುಡೆ

Leave a Comment