ರಾಜ್ಯ ಸುದ್ದಿ

ಬಂಡೀಪುರ ಅರಣ್ಯದಲ್ಲಿ ಬೆಂಕಿ ಅವಘಡ: ಓರ್ವ ಆರೋಪಿ ಬಂಧನ

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಅರಣ್ಯ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಉಂಟಾದ ಕಾಳ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿ ಅರಣ್ಯ ಇಲಾಖೆ, ಓರ್ವ ಆರೋಪಿಯನ್ನು ಬಂಧಿಸಿದೆ.
ಕಾಡಿನ ಅಂಚಿನ ಕಲ್ಲಿಪುರ ನಿವಾಸಿ ಅರುಣ್‌ ಕುಮಾರ್‌ ಬಂಧಿತ ಆರೋಪಿ. ಗೋಪಾಲಸ್ವಾಮಿ ಬೆಟ್ಟ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈತ ತಲೆಮರೆಸಿಕೊಂಡಿದ್ದ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದರು. ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಮತ್ತು ಸಿಬ್ಬಂದಿ ನವೀನ್‌ ಅವರ ತಂಡ ಆರೋಪಿಯನ್ನು ಬಂಧಿಸಿದೆ. ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸಾವಿರಾರು ಎಕರೆ ಅರಣ್ಯ ನಾಶಗೊಂಡಿತ್ತು. ವಿಶೇಷವಾಗಿ ಬಂಡೀಪುರ, ಮೂಲೆಹೊಳೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯಗಳಲ್ಲಿ ಹೆಚ್ಚಿನ ಅರಣ್ಯ ನಾಶವಾಗಿತ್ತು. ಬೆಂಕಿ ನಂದಿಸಲು ಭಾರತೀಯ ವಾಯುಪಡೆಯ ನೆರವು ಪಡೆಯಲಾಗಿತ್ತು.

About the author

ಕನ್ನಡ ಟುಡೆ

Leave a Comment