ರಾಷ್ಟ್ರ

ಬಹುಕೋಟಿ ಮೇವು ಹಗರಣ: ಲಾಲು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಮೇವು ಹಗರಣದ ಇತರೆ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಇಂದು ವಜಾಗೊಳಿಸಿದ್ದಾರೆ. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಜನವರಿ ನಾಲ್ಕರಂದು ಲಾಲು ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿತ್ತು. ಲಾಲು ಪರವಾಗಿ ಕಪಿಲ್ ಸಿಬಾಲ್ ವಾದ ಮಂಡಿಸಿದ್ದರು. ಸಿಬಿಐ ಪರವಾಗಿ ವಕೀಲ ರಾಜೀವ್ ಸಿನ್ಹಾ ವಾದಿಸಿದ್ದರು.
ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಮೂರುವರೆ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಲಾಲು ಪ್ರಸಾದ್ ಯಾದವ್ ಅವರು  ಅನಾರೋಗ್ಯದ ಕಾರಣದಿಂದ ಪ್ರಸ್ತುತ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment