ರಾಜ್ಯ ಸುದ್ದಿ

ಬಾಗಲಕೋಟ ಜಿಲ್ಲೆಯ ಐಹೊಳೆ, ಪಟ್ಟದಕಲ್ಲ ಹಾಗೂ ಬಾದಾಮಿ ಐತಿಹಾಸಿಕ ತಾಣಗಳಿಗೆ ಪ್ರವಾಸೋದ್ಯಮ ಅಭಿವೃದ್ಧಿ

ಬಾಗಲಕೋಟ: ಜಿಲ್ಲೆಯ ಐಹೊಳೆ, ಪಟ್ಟದಕಲ್ಲ ಹಾಗೂ ಬಾದಾಮಿ ಐತಿಹಾಸಿಕ ತಾಣಗಳಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಪ್ರಿಯಾಂಕಾ ಮೇರಿ ಪ್ರಾನ್ಸಸ್‌ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸಿ ತಾಣಗಳನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸುವ ಹಾಗೂ ಪ್ರವಾಸಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ, ಮೂಲಭೂತ ಸೌಕರ್ಯ ಹಾಗೂ ಇತರೆ ಚಟುವಟಿಕೆ ಕೈಗೊಳ್ಳುವ ಸಲುವಾಗಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಕರಡು ಯೋಜನೆ ತಯಾರಿಸಲು ಕರ್ನಾಟಕ ಗೃಹ ಮಂಡಳಿಗೆ ವಹಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ತಿಳಿಸಿದರು.

ಬಾದಾಮಿ ಅಗಸ್ತ್ಯ ತೀರ್ಥ ಹೊಂಡದ ಸುತ್ತಲಿನ ಮನೆಗಳ ಸ್ಥಳಾಂತರಿಸುವುದು, ಪಾರ್ಕಿಂಗ್‌ ಪ್ಲಾಜಾ, ಅಗಸ್ತ್ಯತೀರ್ಥ ಹೊಂಡ ಹೂಳು ಎತ್ತುವುದು, ಪಾದಚಾರಿ ಮಾರ್ಗಗಳನ್ನು ಅಭಿವೃದ್ದಿ ಪಡಿಸಲು ಪ್ರಥಮ ಹಂತದಲ್ಲಿ ಕೈಗೆತ್ತಿಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪಟ್ಟದಕಲ್ಲು ಪ್ರವಾಸಿ ತಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮ ಇಲಾ ಖೆಯ 24 ಎಕರೆ ಭೂಪ್ರದೇಶದಲ್ಲಿ ಕೈಗೊಳ್ಳಬೇಕಾದ ಕಾಮಗಾರಿ ಬಗ್ಗೆ, ದೇಶ ವಿದೇಶ ಪ್ರವಾಸಿಗಳಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಸುವ ಸಲುವಾಗಿ ಕರಡು ಯೋಜನೆ ತಯಾರಿಸಲು ಅಗತ್ಯ ಇರುವ ಮಾಹಿತಿಯನ್ನು ಸಂಗ್ರಹಿಸಿದರು.

ಐಹೊಳೆ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿ ಐಹೊಳೆ ಪ್ರದೇಶವನ್ನು ಸಂಪೂರ್ಣವಾಗಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಂದ ಪಡೆದುಕೊಂಡರು. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಒಂದೇ ಬಾರಿಗೆ ಅಭಿವೃದ್ದಿ ಪಡಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತವಾಗಿ ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳಲಾಗುವುದು. ಐಹೊಳೆ, ಪಟ್ಟದಕಲ್ಲ ಹಾಗೂ ಬಾದಾಮಿ ತಾಣಗಳ ಕರಡು ಯೋಜನೆ ತಯಾರಿಸಲು ಕ್ರಮಕೈಗೊಳ್ಳಲಾಗುವುದೆಂದರು. ಡಿಸಿ ಆರ್‌.ರಾಮಚಂದ್ರನ್‌ ಸೇರಿದಂತೆ ಪುರಾತತ್ವ ಇಲಾಖೆಯ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

About the author

ಕನ್ನಡ ಟುಡೆ

Leave a Comment