ರಾಜಕೀಯ

ಬಾಗೇಪಲ್ಲಿ; ನಟ ಸಾಯಿಕುಮಾರ್ ಗೆ ಟಿಕೆಟ್ ಇಲ್ಲ? ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ಬಾಗೇಪಲ್ಲಿ ಘೋಷಿತ ಬಿಜೆಪಿ ಅಭ್ಯರ್ಥಿ, ನಟ ಸಾಯಿಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು ಎಂದು ಬೆಂಬಲಿಗರು ಭಾನುವಾರ ರಾತ್ರಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಟ ಸಾಯಿಕುಮಾರ್ ಅವರು ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಆದರೆ ಈವರೆಗೂ ಸಾಯಿಕುಮಾರ್ ಅವರಿಗೆ ಬಿ ಫಾರಂ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಅಭ್ಯರ್ಥಿಯನ್ನು ಬದಲಿಸಬಾರದು ಎಂದು ಬೆಂಬಲಿಗರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದಾರೆ.

ಕೃಷ್ಣಾ ರೆಡ್ಡಿ ಎಂಬವರು ಬಾಗೇಪಲ್ಲಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಸಾಯಿಕುಮಾರ್ ಅವರಿಗೇ ಟಿಕೆಟ್ ನೀಡಬೇಕೆಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ನಿವಾಸದ ಮುಂದೆ ಬೆಂಬಲಿಗರು ಆಗ್ರಹಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment