ರಾಜಕೀಯ

ಬಾದಾಮಿಯಲ್ಲಿ ಬಿಜೆಪಿಯಿಂದ,ಜೆಡಿಎಸ್ ನಿಂದ ಯಾರೇ ಸ್ಪರ್ಧೆ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ:ಸಿಎಂ ಸಿದ್ದು

ಹುಬ್ಬಳ್ಳಿ: ತೀವ್ರ ಕುತೂಹಲ ಕೆರಳಿಸಿರುವ ಸಿಎಂ ಸಿದ್ದರಾಮಯ್ಯ ಅವರ 2ನೇ ಕ್ಷೇತ್ರ ಬಾದಾಮಿಯಲ್ಲಿ ತಾವು ಒಂದು ದಿನ ಮಾತ್ರ ಪ್ರಚಾರ ಮಾಡುವುದಾಗಿ ಹೇಳಿ ಸಿಎಂ ಸಿದ್ದರಾಮಯ್ಯ ಮತ್ತೊಂದು ರಣತಂತ್ರ ರೂಪಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷ ಸುಭದ್ರವಾಗಿದೆ. ಹೀಗಾಗಿ ನನಗೆ ಹೆಚ್ಚು ಶ್ರಮವಿಲ್ಲ. ಜಿಲ್ಲೆಯ ಕಾರ್ಯಕರ್ತರೇ ತುಂಬಾ ಚೆನ್ನಾಗಿ ಪ್ರಚಾರ ಮಾಡುತ್ತಿದ್ದು, ಹೀಗಾಗಿ ತಮ್ಮ ಮೇಲೆ ಹೆಚ್ಚಿನ ಒತ್ತಡವಿಲ್ಲ. ಇದೇ ಕಾರಣಕ್ಕೆ ತಾವು ಬಾದಾಮಿಯಲ್ಲಿ ಒಂದು ದಿನ ಪ್ರಚಾರ ಮಾತ್ರ ಮಾಡುತ್ತಿದ್ದು, ಅಂದೇ ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡುತ್ತೇವೆ ಎಂದು ಸಿದ್ದರಾಮ್ಯಯ ಹೇಳಿದರು.

ಇದೇ ವೇಳೆ ಬಾದಾಮಿಯಲ್ಲಿ ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾದಾಮಿಯಲ್ಲಿ ಬಿಜೆಪಿಯಿಂದಾಗಲಿ ಅಥವಾ ಜೆಡಿಎಸ್ ನಿಂದಾಗಲಿ ಯಾರೇ ಸ್ಪರ್ಧೆ ಮಾಡಿದರೂ ಅದಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಬಾದಾಮಿ ಪಕ್ಷದ ಗೆಲುವು ನಿಶ್ಚಿತ. ಭಾರಿ ದೊಡ್ಡ ಪ್ರಮಾಣದಲ್ಲೇ ಗೆಲುವು ಸಾಧಿಸುತ್ತೇನೆ. ಅದು ಪಕ್ಷದ ಅಥವಾ ವಿರುದ್ಧವಾಗಿದ್ದರೂ ನಾವು ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಜಿಲ್ಲೆಯ ಜನರ ಒಲವು ಕಾಂಗ್ರೆಸ್ ಪರವಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬಾದಾಮಿ ಕರ್ನಾಟಕದ ಒಂದು ಜಿಲ್ಲೆ.  ದಕ್ಷಿಣ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಎಂಬ ಬೇಧ ಮಾಡುವುದು ಸರಿಯಲ್ಲ. ಅಂತಹ ಯಾವುದೇ ಭಾವನೆಗಳು ನಮ್ಮಲ್ಲೂ ಇಲ್ಲ. ಉತ್ತರ ಕರ್ನಾಟಕದ ಭಾಗದ ಜನತೆ ತಮ್ಮ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸುವಂತೆ ಒತ್ತಾಯ ಹೇರಿದರು. ಹೀಗಾಗಿ ಅವರ ಒತ್ತಾಯಕ್ಕೆ ಮಣಿದು ಬಾದಾಮಿಯಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಅಂತೆಯೇ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪುತ್ರ ಯತೀಂದ್ರ ಕೂಡ ದೊಡ್ಡ ಮಟ್ಟದಲ್ಲಿ ವಿಜಯ ಸಾಧಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

 

About the author

ಕನ್ನಡ ಟುಡೆ

Leave a Comment