ರಾಜಕೀಯ

ಬಾದಾಮಿಯಿಂದ ಸ್ಪರ್ಧಿಸುವ ವಿಷಯ ಕುರಿತು ವರಿಷ್ಠರ ನಿರ್ಧಾರಕ್ಕೆ ಬದ್ಧ : ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಕಡೂರು: ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದಂತೆ ಬಾದಾಮಿ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿಂದು ಮಾತನಾಡಿದ ಅವರು ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಬೇಕು. ಹೈಕಮಾಂಡ್ ಹೇಳಿದರೆ ಬಾದಾಮಿಯಿಂದ ಸ್ಪರ್ಧಿಸುತ್ತೇನೆ. ಪಕ್ಷದ ಹೈಕಮಾಂಡ್​ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ. ಬಾದಾಮಿಯಿಂದ ಸ್ಪರ್ಧಿಸುವ ವಿಷಯ ಕುರಿತು ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಗದಗಿನಲ್ಲಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಈವರೆಗೂ ವರಿಷ್ಠರ ಸೂಚನೆ ಬಂದಿಲ್ಲ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ. ಬಳ್ಳಾರಿ ಜನ್ಮಭೂಮಿಯಾದರೆ, ಗದಗ ಕರ್ಮಭೂಮಿಯಾಗಿದ್ದು, ನಾಲ್ಕು ಕ್ಷೇತ್ರಗಳ ಗೆಲುವಿಗೆ ಪಣ ತೊಟ್ಟಿದ್ದೇವೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment