ರಾಜಕೀಯ

ಬಾಯಿ ತಪ್ಪಿ ಸಿದ್ದರಾಮಯ್ಯ ಬದಲು ಯಡಿಯೂರಪ್ಪ ಸರ್ಕಾರ ಭ್ರಷ್ಟ ಎಂದಿದ್ದೆ: ಅಮಿತ್ ಶಾ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಂತೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲು ಬಿ.ಎಸ್.ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ ಎಂದು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮೈಸೂರಿನಲ್ಲಿ ಮಾತನಾಡಿರುವ ಅವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲಿಗೆ ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ. ಇಷ್ಟಕ್ಕೆ ಕಾಂಗ್ರೆಸ್ ಪಕ್ಷ ಅತೀವ ಸಂತಸಪಟ್ಟಿತ್ತು. ರಾಹುಲ್ ಗಾಂಧಿಯವರಿಗೆ ಒಂದನ್ನು ಹೇಳಲು ಇಚ್ಛಿಸುತ್ತೇನೆ, ನಾನು ತಪ್ಪು ಮಾಡಿರಬಹುದು. ಆದರೆ, ಕರ್ನಾಟಕದ ಜನತೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಹಾಗೂ ಆರ್’ಎಸ್ಎಸ್ ಕಾರ್ಯಕರ್ತರ ಹತ್ಯೆ ಕುರಿತಂತೆ ಮಾತನಾಡಿರುವ ಅವರು, ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ. 24ಕ್ಕೂ ಹೆಚ್ಚು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಆದರೆ, ಪೊಲೀಸರು ಈ ವರೆಗೂ ಹಂತಕರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹಂತಕರು ಸ್ವತಂತ್ರವಾಗಿ ಓಡಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಂತ್ಯಗೊಳ್ಳುವ ಕಾಲ ಸನಿಹಬಂದಿದೆ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನ್ಯಾಯವನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment