ರಾಜಕೀಯ

ಬಿಜೆಪಿಗೆ ಮತ ಹಾಕುವವರು ಮುಸ್ಲಿಂರೇ ಅಲ್ಲ: ಸಚಿವ ಜಮೀರ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವವರು ಮುಸ್ಲಿಂರೇ ಅಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಆಲ್ ಇಂಡಿಯಾ ಜಮೀಯತ್ ಉಲ್ ಮನ್ಸೂರ್ ಸಂಘಟನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನದಾಫ್ ಪಿಂಜಾರ ಹಾಗೂ ಮನ್ಸೂರಿ ಸಮಾಜಗಳ ರಾಷ್ಟ್ರೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಜಮೀರ್ ಬದಲಾವಣೆಗಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿ ಮಾಡಲಾಯಿತು. ಆದರೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಬದಲಾಗಿ ದೇಶದಲ್ಲಿ ಅಸಮಾನತೆ, ಆರ್ಥಿಕ ಸಂಕಷ್ಟ ಸೇರಿದಂತೆ ದೊಡ್ಡ ದೊಡ್ಡ ಸಮಸ್ಯೆಗಳನ್ನು ಹುಟ್ಟು ಹಾಕಿದ್ದಾರೆ. ದೇಶದಲ್ಲಿ ಜಾತ್ಯಾತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕವಂತಹ ವಾತಾವರಣ ನಿರ್ಮಾಣವಾಗಿದೆ. ಮುಂದೆ ಹೀಗಾಗಬಾರದೆಂದರೆ ಮುಸ್ಲಿಂರು ಜಾತ್ಯಾತೀತ ಪಕ್ಷಕ್ಕೆ ಮತ ಹಾಕಬೇಕು ಎಂದು ಕರೆ ನೀಡಿದರು. ಪ್ರಧಾನಿ ಮೋದಿ ಹೇಳಿದಂತೆ 15 ಲಕ್ಷ ರುಪಾಯಿ ನಮ್ಮ ಬ್ಯಾಂಕ್ ಖಾತೆಗೆ ಬರಲೇ ಇಲ್ಲ. ದೇಶಕ್ಕೆ ಅಚ್ಚೇ ದಿನ್ ಸಹ ಬರಲೇ ಇಲ್ಲ ಎಂದರು

About the author

ಕನ್ನಡ ಟುಡೆ

Leave a Comment