ರಾಜ್ಯ ಸುದ್ದಿ

ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನಮ್ಮ ಜೊತೆ ಕೈ ಜೋಡಿಸಬೇಕು: ದೇವೇಗೌಡ

ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನಮ್ಮ ಜೊತೆ ಸಹಕರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪಕ್ಷದ ಅಲ್ಪ ಸಂಖ್ಯಾತ ಘಟಕದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಪಣ ತೊಟ್ಟಿದೆ. ಹೀಗಾಗಿ ಕಾಂಗ್ರೆಸ್ ನಮ್ಮ ಜೊತೆ ಕೈ ಜೋಡಿಸಬೇಕು ಎಂದು ಹೇಳಿದ್ದಾರೆ.
2018ರ ಮೇ ತಿಂಗಳಿನಲ್ಲಿ ಮುಖ್ಯಮಂತ್ರಿಯಾಗಿ ಕುಮಾರ ಸ್ವಾಮಿ  ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಎಲ್ಲಾ ಜಾತ್ಯಾತೀತ ಪಕ್ಷಗಳ ನಾಯಕರು ಒಗ್ಗೂಡಿ ಪ್ರಬಲ ಸಂದೇಶ ರವಾನಿಸಿದ್ದರು ಎಂದು ತಿಳಿಸಿದ್ದಾರೆ. ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ   ದೂರವಿಡಲು ನಾವು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ ಎಂದು ಹೇಳಿದ ದೇವೇಗೌಡ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಎಲ್ಲಾ 28 ಸೀಟುಗಳಲ್ಲೂ ಜಯ ಗಳಿಸಲಿದೆ ಎಂದು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment