ರಾಷ್ಟ್ರ ಸುದ್ದಿ

ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು, ಆದರೆ ಮೋದಿ ಪ್ರಧಾನಿಯಾಗಲ್ಲ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್

ಮುಂಬೈ: ಲೋಕಸಭಾ ಚುನಾವಣೆ 2019ರಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಆದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್ ಅವರು, ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ನರೇಂದ್ರ ಮೋದಿಗೆ ಕಬ್ಬಿಣದ ಕಡಲೆಯಾಗಲಿದೆ. ಬಿಜೆಪಿಗೆ ಈ ಬಾರಿ ಸ್ಪಷ್ಟ ಬಹುಮತ ಖಂಡಿತಾ ಸಿಗುವುದಿಲ್ಲ, ಆದರೆ ಸೀಟುಗಳ ಆಧಾರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದೇ ಹೊರತು, ಅದಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಅಧಿಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅತ್ಯಗತ್ಯ ಎಂದು ಹೇಳಿರುವ ಶರದ್ ಪವಾರ್, ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬಿಜೆಪಿಗೆ ಬೆಂಬಲ ನೀಡುವ ಇತರೆ ಪಕ್ಷಗಳು ನರೇಂದ್ರ ಮೋದಿ ಹೊರತಾಗಿ ಬೇರೆ ನಾಯಕರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 283 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ಪಡೆದಿತ್ತು.

About the author

ಕನ್ನಡ ಟುಡೆ

Leave a Comment