ರಾಜಕೀಯ

ಬಿಜೆಪಿ ಉಪಾಧ್ಯಕ್ಷರಾಗಿ ತೇಜಸ್ವಿನಿ ಅನಂತಕುಮಾರ್‌ ನೇಮಕ

ಬೆಂಗಳೂರು: ಮಾಜಿ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಚೌಕಿದಾರ್ಬಿ .ಎಸ್‌.ಯಡಿಯೂರಪ್ಪ ಹೆಸರಿನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಎಸ್‌ವೈ ಪ್ರಕಟಣೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೊನೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ತೇಜಸ್ವಿನಿ ಅವರನ್ನು ಸಮಾಧಾನಪಡಿಸುವ ಯತ್ನವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೊನೆಯ ಕ್ಷಣದ ವರೆಗೂ ಸಸ್ಪೆನ್ಸ್‌ ಕಾಯ್ದುಕೊಂಡು ಬಳಿಕ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ಘೋಷಿಸಿರುವುದು ಅನಂತಕುಮಾರ್ ಅಭಿಮಾನಿಗಳಿಗೆ ಹಾಗೂ ತೇಜಸ್ವಿನಿ ಅನಂತಕುಮಾರ್‌ ಅವರ ಅತೃಪ್ತಿಗೆ ಕಾರಣವಾಗಿತ್ತು.

About the author

ಕನ್ನಡ ಟುಡೆ

Leave a Comment