ರಾಜಕೀಯ ರಾಜ್ಯ

ಬಿಜೆಪಿ-ಜೆಡಿಎಸ್ ನ ಅನಧಿಕೃತ ಮೈತ್ರಿ ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರದು : ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ನ್ನು ಸೋಲಿಸಲು ರಾಜ್ಯದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅನಧಿಕೃತವಾಗಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಅವರು ನಿನ್ನೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ, ಚಾಮುಂಡೇಶ್ವರಿ, ವರುಣಾ, ಕೆ.ಆರ್.ನಗರ ಮತ್ತು ಇತರ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮಾಡಿಕೊಂಡಿರುವ ಒಪ್ಪಂದಗಳು ಜನರಿಗೆ ಅರ್ಥವಾಗುತ್ತದೆ.

ಆದರೆ ಎರಡೂ ಪಕ್ಷಗಳ ಈ ಹೊಂದಾಣಿಕೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದು ಎಂದು ಹೇಳಿದರು.ಇತ್ತೀಚಿನ ಸಮೀಕ್ಷೆಯೊಂದರಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 100 ಸೀಟುಗಳಿಗಿಂತ ಕಡಿಮೆ ಬರುತ್ತದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯಗಳಿದ್ದು ಮತ್ತೆ ಅಧಿಕಾರಕ್ಕೆ ಮರಳಲಿದೆ. ನನಗೆ ರಾಜ್ಯದ ಜನರ ನಾಡಿಮಿಡಿತ ಅರಿತಿದೆ. ಕಾಂಗ್ರೆಸ್ ಮೇಲೆ ಜನರ ಒಲವಿದೆ. ಬಹುಮತಗಳೊಂದಿಗೆ ನಾವು ಮತ್ತೊಮ್ಮೆ ಸರ್ಕಾರ ರಚಿಸಲಿದ್ದೇವೆ. ವರುಣಾ ಕ್ಷೇತ್ರದಲ್ಲಿ ಯಡಿಯೂರಪ್ಪ ಸೇರಿದಂತೆ ಯಾರ ವಿರುದ್ಧವೂ ನಾವು ಹೋರಾಡಲು ಸಿದ್ಧರಿದ್ದೇವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment