ರಾಜಕೀಯ

ಬಿಜೆಪಿ ಭದ್ರಕೋಟೆಯಲ್ಲಿ ಗುರು-ಶಿಷ್ಯರ ಮಧ್ಯೆಯೇ ಕದನ

ಬೆಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ಪದ್ಮನಾಭನಗರ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಆರ್‌.ಅಶೋಕ್‌ ಅವರ ‘ಹ್ಯಾಟ್ರಿಕ್‌’ ಗೆಲುವಿಗೆ ಬ್ರೇಕ್‌ ಹಾಕಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಣತಂತ್ರ ರೂಪಿಸುತ್ತಿವೆ. ಬಿಜೆಪಿಯಿಂದ ‘ಕೈ’ ಪಾಳಯಕ್ಕೆ ಜಿಗಿದಿರುವವರ ಮಧ್ಯೆಯೇ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದೆ!

ಜೆಡಿಎಸ್‌ ಪಕ್ಷವು ಇದೇ ಮೊದಲ ಬಾರಿಗೆ ಚುನಾವಣಾ ಕದನಕ್ಕೆ ಧುಮುಕಿರುವ ಗುತ್ತಿಗೆದಾರ ವಿ.ಕೆ.ಗೋಪಾಲ್‌ ಎಂಬುವರನ್ನು ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸಿದೆ. ಬಿಜೆಪಿಯಿಂದ ಮೂರನೇ ಬಾರಿಗೆ ಆರ್‌.ಅಶೋಕ್‌ ಅವರೇ ಕಣಕ್ಕಿಳಿಯುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದಂಡು ದೊಡ್ಡದಿದ್ದು, ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment