ರಾಜಕೀಯ

ಬಿಜೆಪಿ ಮುಕ್ತ ಭಾರತ: ಪ್ರಧಾನಿ ಮೋದಿ ಟ್ವೀಟ್ ಬಳಸಿ ಬಿಜೆಪಿಯನ್ನು ಕುಟುಕಿದ ರಮ್ಯಾ

ನವದೆಹಲಿ: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮಕಾಡೆ ಮಲಗಿದ್ದು ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಂಸದೆ, ನಟಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಟ್ವೀಟ್ ಅನ್ನೇ ಬಳಸಿ ಬಿಜೆಪಿಯನ್ನು ಕುಟುಕಿದ್ದಾರೆ.
ಐದು ರಾಜ್ಯಗಳಲ್ಲಿ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಲೇ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡುವ ಮೂಲಕ ಬಿಜೆಪಿಯನ್ನು ಕುಟುಕಿದ್ದಾರೆ. 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಕಂಡಿತ್ತು. ಪಂಜಾಬ್ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿತ್ತು. ಅಂದು ನರೇಂದ್ರ ಮೋದಿ ತಮ್ಮ ಟ್ವೀಟರ್ ನಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನೇ ಬಳಸಿ ರಮ್ಯಾ ನೇರವಾಗಿ ಬಿಜೆಪಿ ಮುಕ್ತ ಭಾರತ ಎಂದು ಟ್ವೀಟಿಸಿದ್ದಾರೆ.

About the author

ಕನ್ನಡ ಟುಡೆ

Leave a Comment