ರಾಜಕೀಯ

ಬಿಜೆಪಿ ಶಾಸಕರು ರಾಜ್ಯಕ್ಕೆ ಬಂದ ಮೇಲೆ ನಮ್ಮ ಆಟ ಶುರುವಾಗುತ್ತೆ: ಪ್ರವಾಸೋದ್ಯಮ ಸಚಿವ ಮಹೇಶ್​

ಮೈಸೂರು: ಬಿಜೆಪಿ ಶಾಸಕರು ದೆಹಲಿಯಿಂದ ರಾಜ್ಯಕ್ಕೆ ವಾಪಸ್​ ಬಂದ ಮೇಲೆ ಯಾರು ಯಾರು ರಾಜೀನಾಮೆ ನೀಡುತ್ತಾರೆ ಎಂಬುದನ್ನು ಕಾದು ನೋಡಿ. ನಮ್ಮೊಂದಿಗೆ ಬಿಜೆಪಿಯ 6 ಶಾಸಕರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್​ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್​ ಶಾಸಕರು ರೆಸಾರ್ಟ್​ಗೆ ಹೋಗಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಸಮ್ಮಿಶ್ರ ಸರ್ಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಾ.ರಾ. ಮಹೇಶ್​ ವಾಗ್ದಾಳಿ ನಡೆಸಿದರು.

ನಿಖಿಲ್​ ಕುಮಾರಸ್ವಾಮಿಯನ್ನು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆದಿದೆ. ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳೂ ಕೂಡ ನಿಖಿಲ್​ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಪಕ್ಷದ ವರಿಷ್ಠರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಹೇಶ್​ ತಿಳಿಸಿದರು.

About the author

ಕನ್ನಡ ಟುಡೆ

Leave a Comment