ರಾಜ್ಯ ಸುದ್ದಿ

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬಚಾವ್

ಚಿತ್ರದುರ್ಗ: ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದಾಗ ಬೆಂಬಲಿಗರು ಅದನ್ನು ತಡೆದಿದ್ದಾರೆ.
ಗೂಳಿಹಟ್ಟಿ ಶೇಖರ್ ಅವರ ಕಿವಿ, ಮೂಗು, ಬಾಯೊಳಗೆ ಪೆಟ್ರೋಲ್ ಹರಿದುಹೋಗಿದೆ. ಬೆಂಬಲಿಗರು ಸರಿಯಾದ ಸಮಯಕ್ಕೆ ಅವರನ್ನು ತಡೆಯದೇ ಹೋಗಿದ್ದರೆ ಬೆಂಕಿ ಕಡ್ಡಿ ಗೀರಿಕೊಂಡಿರುತ್ತಿದ್ದರೆನ್ನಲಾಗಿದೆ. ಗೂಳಿಹಟ್ಟಿ ಶೇಖರ್ ಅವರನ್ನು ಸದ್ಯಕ್ಕೆ ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment