ರಾಜ್ಯ ಸುದ್ದಿ

ಬಿಡಿಎ ಎಂಜಿನೀಯರ್ ಎನ್.ಜಿ.ಗೌಡಯ್ಯ, ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಹಣ ಜಪ್ತಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ತಂಡ ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ. ಮಲ್ಲೇಶ್ವರಂನಲ್ಲಿರುವ ಕೆಐಎಡಿಬಿ ಮುಖ್ಯ ಎಂಜಿನಿಯರ್ ಟಿ.ಆರ್.ಸ್ವಾಮಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್‍ ನಲ್ಲಿರುವ ಫ್ಲ್ಯಾಟ್ ಮೇಲೂ ದಾಳಿಯನ್ನು ಮಾಡಲಾಗಿದೆ. ದಾಳಿ ವೇಳೆ 10 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಟಿ.ಆರ್.ಸ್ವಾಮಿ ಅವರು ಎಸಿಬಿ ಅಧಿಕಾರಿಗಳನ್ನು ಕಂಡು ದಂಗಾಗಿ ಕಂತೆ ಕಂತೆ ನೋಟುಗಳನ್ನು ಕಿಟಕಿಯ ಹೊರಗಡೆಯಿಂದ ಎಸೆದಿದ್ದಾರೆ ಎಂದು ಹೇಳಲಾಗಿದೆ. ಬಸವೇಶ್ವರನಗರದಲ್ಲಿರುವ ಬಿಡಿಎ ಅಧೀಕ್ಷಕ ಅಭಿಯಂತರ ಎನ್.ಜಿ. ಗೌಡಯ್ಯ ಅವರ ಮನೆ ಮೇಲೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಯಾವುದೇ ರೀತಿಯ ಹಣ, ಚಿನ್ನ ಪತ್ತೆಯಾಗಿಲ್ಲ. ಬೇನಾಮಿ ಆಸ್ತಿ ಪತ್ರ ಸಿಕ್ಕಿದ್ದು, ಮೂಲ ದಾಖಲಾತಿಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

About the author

ಕನ್ನಡ ಟುಡೆ

Leave a Comment