ಕ್ರೈಂ

ಬೆಂಗಳೂರಿನಲ್ಲಿ ಇಬ್ಬರು ರೌಡಿಶೀಟರ್‌ಗಳ ಬರ್ಬರ ಹತ್ಯೆ

ಬೆಂಗಳೂರು: ನಗರದಲ್ಲಿ ಇಬ್ಬರು ರೌಡಿಶೀಟರ್‌ಗಳ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ಹುಳಿಮಾವು ಹಾಗೂ ಅತ್ತಿಬೆಲೆ ಠಾಣೆಯ ರೌಡಿಶೀಟರ್‌ಗಳಾದ ಪಳನಿ ಮತ್ತು ಮುರಗ ಕೊಲೆಯಾದ ರೌಡಿಗಳು.

ಹಳೆ ದ್ವೇಶದ ಹಿನ್ನೆಲೆಯಲ್ಲಿ ಬಿಟಿಎಸ್‌ ಗ್ಯಾಂಗ್‌ನ ಎಂಟು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಕಳೆದ ರಾತ್ರಿ ಪಳನಿ ಹಾಗೂ ಮುರಗ ಮದ್ಯಪಾನ ಮಾಡಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿ ಬಂದ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment