ರಾಜ್ಯ ಸುದ್ದಿ

ಬೆಂಗಳೂರು: ಅರ್ಥಪೂರ್ಣಅಂಬೇಡ್ಕರ್‌ ಜಯಂತಿ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 128ನೇ ಜಯಂತಿಯನ್ನು ನಗರದ ಹಲವೆಡೆ ಭಾನುವಾರ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಸಚಿವ ಪ್ರಿಯಾಂಕ ಖರ್ಗೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಮತ್ತಿತರರು ಉಪಸ್ಥಿತರಿದ್ದು, ಅಂಬೇಡ್ಕರ್‌ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲಾಯಿತು. ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಉಪಮೇಯರ್‌ ಭದ್ರೇಗೌಡ, ಮಾಜಿ ಮೇಯರ್‌ ಸಂಪತ್‌ ಸೇರಿದಂತೆ ಹಲವರು ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಪ್ರಜಾ ವಿಮೋಚನಾ ಚಳವಳಿ ಸಮತಾವಾದ ಸಂಘದಿಂದ ಕಬ್ಬನ್‌ಪಾರ್ಕ್‌ನ ಎನ್‌ಜಿಒ ಹಾಲ್‌ನಲ್ಲಿ ಅಂಬೇಡ್ಕರ್‌ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಪ್ರಮುಖರು ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಹಲವು ಸಂಘ- ಸಂಸ್ಥೆಗಳು, ರಾಜಕೀಯ ಪಕ್ಷಗಳು ಅಂಬೇಡ್ಕರ್‌ ಜಯಂತಿ ಆಚರಿಸಿದವು.

About the author

ಕನ್ನಡ ಟುಡೆ

Leave a Comment