ರಾಜ್ಯ ಸುದ್ದಿ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ವಿಎಚ್ ಪಿ ರ್ಯಾಲಿ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಕೇಸರಿ ಪಡೆ ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಜಾಗೃತ ಅಭಿಯಾನ ಕೈಗೊಂಡಿದ್ದು ನಗರದಲ್ಲಿ ಇದೇ ಭಾನುವಾರ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನಗ್ರಹ ರ್ಯಾಲಿ ಹಮ್ಮಿಕೊಂಡಿದೆ.

ರಾಮ ಮಂದಿರ ನಿರ್ಮಾಣಕ್ಕೆ ಶಾಸನ ಜಾರಿಗೆ ತರಬೇಕೆಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಒತ್ತಡ ಹೇರಲು ಈ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಯಿದೆ. ಮಂಗಳೂರು ಮತ್ತು ಹುಬ್ಬಳ್ಳಿಗಳಲ್ಲಿ ಕೂಡ ಇದೇ ರೀತಿಯ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಸುಮಾರು 1 ಲಕ್ಷ ಜನ ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಕೇಶವ ಹೆಗ್ಡೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment