ದೇಶ ವಿದೇಶ

ಬೆಂಗಳೂರು: ಕಾರು ಚಾಲನೆ ಮಾಡಿ ಹಿಂದಿಕ್ಕುವಾಗ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಬೆಂಗಳೂರು: ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಹೆಬ್ಬಾಳದ ಕೆಂಪಾಪುರ ನಿವಾಸಿ ಸಚಿನ್ (20) ಮೃತ ವಿದ್ಯಾರ್ಥಿ. ಘಟನೆಯಲ್ಲಿ ಇಂಡಿಕಾ ಕಾರು ಚಾಲಕ ಅಪ್ಸರ್ (32) ಹಾಗೂ ಲಕ್ಷ್ಮೀ ವರದರಾಜ್ (61) ಎಂಬುವವರು ಗಾಯಗೊಂಡಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪರಡೆಯುತ್ತಿದ್ದಾರೆ. ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್, ನಿನ್ನೆ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ 1.50ರ ಸುಮಾರಿಗೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಕೊಡಿಗೇಹಳ್ಳಿ ಸಮೀಪ ವೇಗವಾಗಿ ಕಾರು ಚಾಲನೆ ಮಾಡಿದ್ದಾನೆ. ಈ ವೇಳೆ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರನ್ನು ಹಿಂದಿಕ್ಕುವ ಭರದಲ್ಲಿ ಇನ್ನೋವಾ ಕಾರಿಗೆ ಡಿಕ್ಕಿಯಾಗಿ ಬಳಿಕ ಆಲ್ಟೋ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಚಿನ್, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ,
ಲಕ್ಷ್ಮೀ ವರದರಾಜ್ ಅವರು ಮೂಲತಃ ತೆಲಂಗಾಣ ರಾಜ್ಯದವರಾಗಿದ್ದು, ಜಯನಗರದಲ್ಲಿನ ಸಂಬಂಧಿಕೊಬ್ಬರ ಮನೆಗೆ ಬಂದಿದ್ದರು. ವಾಪಸ್ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೋಗುವಾಗ ದುರ್ಘಟನೆ ನಡೆದಿದೆ. ಸಚಿನ್ ಚಾಲನೆ ಮಾಡುತ್ತಿದ್ದ ಆಲ್ಟೋ ಕಾರಿನಲ್ಲಿ ದಾಖಲೆಗಳು ಪತ್ತೆಯಾಗಿಲ್ಲ. ಇನ್ನಷ್ಟೇ ಅವುಗಳನ್ನು ಪತ್ತೆ ಹಚ್ಚಬೇಕಿದೆ. ಅತಿ ವೇಗದಿಂದ ಚಾಲನೆ ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಇದ್ದಾರೆ. ಪ್ರಕರಣ ಸಂಬಂಧ ಹೆಬ್ಬಾಳ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment