ರಾಷ್ಟ್ರ ಸುದ್ದಿ

ಬೆಂಗಳೂರು, ದೆಹಲಿಯಲ್ಲಿ ರಾಬರ್ಟ್ ವಾದ್ರಾ ಆಪ್ತರ ಮನೆ ಮೇಲೆ ಇಡಿ ದಾಳಿ

ನವದೆಹಲಿ: ರಕ್ಷಣಾ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಮೂವರು ಆಪ್ತರ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಹಾಗೂ ದೆಹಲಿಯಲ್ಲಿರುವ ರಾಬರ್ಟ್ ವಾದ್ರಾ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಮೂವರು ರಕ್ಷಣಾ ಖರೀದಿ ವ್ಯವಹಾರದಲ್ಲಿ ಕಮಿಷನ್ ಪಡೆದ ಶಂಕೆ ವ್ಯಕ್ತವಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ರಕ್ಷಣಾ ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರಾಬರ್ಟ್ ವಾದ್ರಾ ಅವರ ಆಪ್ತರ ಮೇಲೆ ದಾಳಿ ನಡೆದಿದೆ. ಆದರೆ ದಾಳಿಗೆ ಒಳಗಾದ ಆಪ್ತರ ಹೆಸರನ್ನು ಬಹಿರಂಗಪಡಿಸಲು ಇಡಿ ನಿರಾಕರಿಸಿದೆ. ನವದೆಹಲಿಯ ರಾಬರ್ಟ್ ವಾದ್ರಾ ಕಚೇರಿಯ ಬೀಗ ಮುರಿದು ಒಳ ನುಗ್ಗಿ ಪರಿಶೀಲನೆ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತು ಮೋದಿ ಸರ್ಕಾರ ಈ ರೀತಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲ ಅವರು ಟ್ವೀಟ್ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment