ರಾಜ್ಯ ಸುದ್ದಿ

ಬೆಂಗಳೂರು: ಫುಟ್ ಪಾತ್ ಮೇಲೆ ಕಂಟೈನರ್ ಹರಿದು 14ರ ಬಾಲಕ ಸಾವು

ಬೆಂಗಳೂರು: ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಕಂಟೈನರ್ ಹರಿದು ಓರ್ವ ಬಾಲಕ ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು ನೆಲಮಂಗಲದ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ಬೆಂಗಳೂರು ರಸ್ತೆಯ ಜಾಸ್ ಟೋಲ್ ಸಮೀಪ ಸಂಭವಿಸಿದ ಅಪಘಾತದಲ್ಲಿ  ಜೋತು ಚೌಹಾನ್ (14 ) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಬೀರ ಗಾಯಗಳಾಗಿದ್ದರೆ ಅದೃಷ್ಟವಶಾತ್ ಉಳಿದವರು ಸಣ್ಣ ಪುಟ್ಟ ಗಾಯಗಳೊಡನೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದವರಾಗಿದ್ದ 15 ಮಂದಿ ರಸ್ತೆ ಬದಿಯ ಫುಟ್ ಪಾತ್ ಮೇಲೆ ರಾತ್ರಿ ಮಲಗಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಂಟೈನರ್ ಲಾರಿಯೊಂದು ಮಲಗಿದ್ದವರ ಮೇಲೆ ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತಕ್ಕೆ ಕಾರಣವಾದ ಕಂಟೈನರ್ ಚಾಲಕ ಕಂಟೈನರ್ ಲಾರಿ ಸಮೇತ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment