ರಾಜ್ಯ ಸುದ್ದಿ

ಬೆಂಗಳೂರು ವಿವಿನಲ್ಲಿ ಈಶಾನ್ಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್: ನಾಳೆ ಪ್ರಧಾನಿ ಮೋದಿ ಉದ್ಘಾಟನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯವು  ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮಾರ್ಚ್ 6ರಂದು ಕಲಬುರ್ಗಿಗೆ  ಆಗಮಿಸಲಿರುವ ಮೋದಿ ಡಿಜಿಟಲ್ ಮಾಧ್ಯಮದ ಮೂಲಕ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಿದ್ದಾರೆ.
ಈಶಾನ್ಯ ರಾಜ್ಯಗಳಿಂದ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿನಿಯರಿಗಾಗಿ ಈ ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುವ ಆ ಭಾಗದ ವಿದ್ಯಾರ್ಥಿನಿಯರು ಇಲ್ಲಿ ತಂಗಬಹುದಾಗಿದೆ.ವಿದ್ಯಾರ್ಥಿ ನಿಲಯವು  5.5 ಎಕರೆ ಭೂಮಿ ಹೊಂದಿದ್ದು 2,000  ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳುವ ವ್ಯವಸ್ಥೆ ಇದೆ. ನಾರ್ತ್ ಈಸ್ಟ್ ಕೌನ್ಸಿಲ್ ಸಹಯೋಗದೊಡನೆ  ಇದನ್ನು ನಿರ್ಮಿಸಲಾಗಿದೆ. ಆದರೆ ಈ ವಿದ್ಯಾರ್ಥಿ ನಿಲಯದಲ್ಲೇ ಶೇ. 25 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಸ್ಥಳೀಯ ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ.2014 ರಲ್ಲಿ ಹೊಸದಿಲ್ಲಿಯಲ್ಲಿ ಅರುಣಾಚಲ ಪ್ರದೇಶದ ವಿದ್ಯಾರ್ಥಿಗಳು ದಾಳಿಗೊಳಗಾದ ಬಳಿಕ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ ವಿದ್ಯಾರ್ಥಿನಿಲಯದ ನಿರ್ಮಾಣದ ಅಂದಾಜು ವೆಚ್ಚ 13 ಕೋಟಿ ರು. ಎಂದು ಹೇಳಲಾಗಿದೆ.

About the author

ಕನ್ನಡ ಟುಡೆ

Leave a Comment