ರಾಜ್ಯ ಸುದ್ದಿ

ಬೆಂಗಳೂರು: ಸರ್ಕಾರಿ ಬಾಲ ಮಂದಿರದಲ್ಲಿ ರಾತ್ರಿ ಊಟ ಸೇವಿಸಿ 103 ಮಕ್ಕಳು ಅಸ್ವಸ್ಥ

ಬೆಂಗಳೂರು: ರಾತ್ರಿ ಊಟ ಸೇವಿಸಿದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲ ಮಂದಿರದಲ್ಲಿ ಭಾನುವಾರ ನಡೆದಿದೆ.
ಕಳೆದ ರಾತ್ರಿ ಬಾಲ ಮಂದಿರದಲ್ಲಿ ಎಂದಿನಂತೆ ಊಟ ಮಾಡಿದ್ದಾರೆ. ಊಟ ಮಾಡಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಲ್ಲಿ ಹೊಟ್ಟೋನೋವು, ವಾಂತಿ ಶುರುವಾಗಿದೆ. ಕೂಡಲೇ ಮಕ್ಕಳನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಎಲ್ಲಾ ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 103 ಮಕ್ಕಳ ಪೈಕಿ ಮೂವರನ್ನು ಅವಲೋಕನದಲ್ಲಿರಿಸಲಾಗಿದೆ. ಶೀಘ್ರದಲ್ಲೇ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment