ರಾಜ್ಯ ಸುದ್ದಿ

ಬೆಳಗಾವಿ ಅಧಿವೇಶನ: ಮೊದಲನೇ ದಿನವೇ ಮೈತ್ರಿ ಸರ್ಕಾರಕ್ಕೆ ರೈತ ಹೋರಾಟದ ಬಿಸಿ

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವಂತೆಯೇ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಯು ಸೋಮವಾರ ನಗರದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗಿನಿಂದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡಲು ಭಾಗವಹಿಸುತ್ತಿದ್ದಾರೆ. ಬಿಜೆಪಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ಭಾಗವಹಿಸುತ್ತಿದ್ದು, ವಿವಿಧ ಜಿಲ್ಲೆಗಳಿಂದ ಆಗಮಿಸುವ ಜನರಿಗೆ ಊಟದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ರೈತರನ್ನು ಕರೆತರುವ ಹೊಣೆಯನ್ನು ಆಯಾ ಜಿಲ್ಲಾ ಬಿಜೆಪಿ ಮುಖಂಡರಿಗೆಂ ವರಿಷ್ಠರು ನೀಡಿದ್ದಾರೆಂದು ತಿಳಿದುಬಂದಿದೆ.

About the author

ಕನ್ನಡ ಟುಡೆ

Leave a Comment