ರಾಷ್ಟ್ರ ಸುದ್ದಿ

ಭಯೋತ್ಪಾದಕರ ಹುಟ್ಟಡಗಿಸಲು ಮನಮೋಹನ್ ಸಿಂಗ್ ಗಿಂತ ಮೋದಿಯೇ ಉತ್ತಮ: ಮಾಜಿ ಸಿಎಂ ಶೀಲಾ ದೀಕ್ಷಿತ್

ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗಿಂತ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಉತ್ತಮ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ದೆಹಲಿ ಸಿಎಂ ಶೀಲಾ ದೀಕ್ಷಿತ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್, ಭಯೋತ್ಪಾದನೆ ವಿಚಾರವಾಗಿ ಪ್ರಧಾನಿ ಮೋದಿ ಕೈಗೊಂಡ ದಿಟ್ಟ ಕ್ರಮಗಳನ್ನು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಕೈಗೊಂಡಿರಲಿಲ್ಲ. 26 / 11 ಮುಂಬಯಿ ದಾಳಿಯ ಬಳಿಕ ಭಯೋತ್ಪಾದನೆ ಬಗ್ಗೆ ವ್ಯವಹರಿಸುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಈಗಿನ ಪ್ರಧಾನಿ ಮೋದಿಯಷ್ಟು ಬಲವಾದ ಹಾಗೂ ನಿರ್ಧಾರಯುತವಾದ ಹೋರಾಟ ಮಾಡಲಿಲ್ಲ, ದಿಟ್ಟ ಕ್ರಮ ಕೈಗೊಂಡಿರಲಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಮೋದಿ ಭಯೋತ್ಪಾದನೆ ವಿರುದ್ಧ ಕೈಗೊಂಡ ಕ್ರಮಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದೂ ಶೀಲಾ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಅವರ ಕ್ರಮಗಳನ್ನು ರಾಜಕೀಯ ಸ್ಟಂಟ್ ಎಂದು ಟೀಕಿಸಿದ್ದಾರೆ.

About the author

ಕನ್ನಡ ಟುಡೆ

Leave a Comment