ದೇಶ ವಿದೇಶ

ಭಯೋತ್ಪಾದಕ ಸಂಘಟನೆ ಹತ್ತಿಕ್ಕಿ, ಇಲ್ಲ ಅಂದ್ರೆ ನಾವೇ ನುಗ್ಗಿ ಹೊಡಿತೀವಿ; ಪಾಕ್‌ಗೆ ಇರಾನ್ ಎಚ್ಚರಿಕೆ

ನವದೆಹಲಿ: ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿ ಬೆನ್ನಲ್ಲೇ ನೆರೆಯ ಇರಾನ್ ಸಹ ಎಚ್ಚರಿಕೆ ನೀಡಿದ್ದು ಉಗ್ರ ಸಂಘಟನೆಗಳನ್ನು ಹತ್ತಿಕ್ಕಿ ಇಲ್ಲದಿದ್ದರೆ ಪಾಕ್ ನೊಳಗೆ ನುಗ್ಗಿ ಹೊಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದೆ. ಭಾರತದ ಏರ್ ಸ್ಟ್ರೈಕ್ ಗೆ ಹಲವು ರಾಷ್ಟ್ರಗಳು ಭಾರತದ ಬೆನ್ನಿಗೆ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದವು. ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿ ಕ್ರಮಕೈಗೊಳ್ಳುವ ಬಗ್ಗೆಯೂ ತಿಳಿಸಿದ್ದವು. ಇದೀಗ ಇರಾನ್ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೇ ಹೋಗಿದ್ದು ನೆರೆಯ ರಾಷ್ಟ್ರಗಳ ಜೊತೆ ನಿಮ್ಮ ಬಾಂಧವ್ಯ ಹೇಗಿದೆ ಎಂಬುವುದು ಗೊತ್ತಿದೆ. ಎಲ್ಲಿ ನೋಡಿದರೂ ಅಶಾಂತಿ ಸೃಷ್ಟಿಸುವುದೇ ನಿಮ್ಮ ಕಾಯಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದು ಪಾಕ್ ಜೊತೆ ತಾನೂ ಹೊಂದಿರುವ ಗಡಿ ಪ್ರದೇಶದಲ್ಲಿ ಬೃಹತ್ ಗೋಡೆ ನಿರ್ಮಿಸುವ ಇರಾನ್ ಸಂಸತ್ ನಲ್ಲೂ ಪ್ರಸ್ತಾಪವಾಗಿದೆ.

ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆಗಳು ಇರಾನ್ ನಲ್ಲೂ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದು ಒಂದೊಮ್ಮೆ ನೀವು ಕ್ರಮಕೈಗೊಳ್ಳಲಿದ್ದಾರೆ ನಾವೇ ಉಗ್ರರ ನೆಲೆಗಳನ್ನು ನಾಶ ಪಡಿಸುತ್ತೇವೆ. ನಮ್ಮ ನಿರ್ಣಯಗಳನ್ನು ಪರೀಕ್ಷೆ ಮಾಡಲು ಮುಂದಾಗ ಬೇಡಿ. ನಿಮ್ಮ ಉಪಟಳದಿಂದ ತೊಂದರೆಗೆ ಒಳಗಾದದ ಒಂದೇ ಒಂದು ನೆರ ದೇಶವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

About the author

ಕನ್ನಡ ಟುಡೆ

Leave a Comment