ದೇಶ ವಿದೇಶ

ಭಾರತೀಯ ವಾಯುಸೇನೆಯ 2 ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ: ಪಾಕ್

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಂದಿದ್ದ ಭಾರತದ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಪಾಕಿಸ್ತಾನದ ವಾಯುಸೇನೆ ಹೊಡೆದುರುಳಿಸಿದೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಅಸಿಫ್ ಗಪೂರ್ ಟ್ವೀಟ್ ಮಾಡಿದ್ದಾರೆ.
ಒಂದು ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು ಇನ್ನೊಂದು ಭಾರತದ ಕಾಶ್ಮೀರದ ಭಾಗದಲ್ಲಿ ಪತನಗೊಂಡಿದೆ. ಓರ್ವ ಭಾರತೀಯ ಪೈಲಟ್ ನನ್ನು ಬಂಧಿಸಲಾಗಿದೆ. ಇನ್ನಿಬ್ಬರು ಭಾರತದ ಗಡಿಯೊಳಗೆ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು ಜಮ್ಮು ಮತ್ತು ಕಾಶ್ಮೀರದ ನೌಶೇರ್ ವಲಯದಲ್ಲಿ ಗಡಿ ಉಲ್ಲಂಘನೆ ಮಾಡಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ದಾಳಿ ನಡೆಸುವ ಉದ್ದೇಶದಿಂದ ಭಾರತಕ್ಕೆ ಪ್ರವೇಶಿಸಿತ್ತು. ಪಾಕಿಸ್ತಾನದ ಯುದ್ಧ ವಿಮಾನಗಳು ಪೂಂಚ್ ಹಾಗೂ ರಚೌರಿಯಲ್ಲಿ ಭಾರತೀಯ ಸೇನೆಯ ಪೋಸ್ಟ್ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.

About the author

ಕನ್ನಡ ಟುಡೆ

Leave a Comment