ದೇಶ ವಿದೇಶ

ಭಾರತದ ಒತ್ತಡಕ್ಕೆ ಮಣಿದ ಪಾಕ್ : ನಾಳೆ ಅಭಿನಂದನ್ ವರ್ತಮಾನ್ ಬಿಡುಗಡೆ,ಇಮ್ರಾನ್ ಖಾನ್ ಘೋಷಣೆ

ಇಸ್ಲಾಮಾಬಾದ್: ಪಾಕಿಸ್ತಾನ ವಶದಲ್ಲಿರುವ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.ಭಾರತ ಹಾಗೂ ಅಂತಾರಾಷ್ಟ್ರೀಯ ಸಮುದಾಯದ ಒತ್ತಡಕ್ಕೆ ಕೊನೆಗೂ ಮಣಿದ ಪಾಕಿಸ್ತಾನ ಅಭಿನಂದನ್ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿದೆ.

ಪಾಕಿಸ್ತಾನ ಸಂಸತ್ ನಲ್ಲಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ನಮ್ಮ ವಶದಲ್ಲಿರುವ ಪೈಲಟ್ ಸುರಕ್ಷಿತವಾಗಿದ್ದಾರೆ ಪಾಕಿಸ್ತಾನದ ವಿದೇಶಾಂಗ ಸಚಿವೆ  ಮೊಹಮ್ಮದ್  ಖುರೇಶಿ ಸುದ್ದಿಸಂಸ್ಥೆಯೊಂದಕ್ಕೆ  ಹೇಳಿಕೆ ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment