ರಾಷ್ಟ್ರ ಸುದ್ದಿ

ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೋಯ್ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಸುಪ್ರೀಂ ಕೋರ್ಟ್ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸೇರಿದಂತೆ ಸುಪ್ರೀಂ ಕೋರ್ಟ್ ಹಲವು ನ್ಯಾಯಾಧೀಶರು, ಕೇಂದ್ರ ಸರ್ಕಾರದ ಮುಖ್ಯ ಅಧಿಕಾರಿಗಳು  ಪಾಲ್ಗೊಂಡಿದ್ದರು. ಇನ್ನು ನಿರ್ಗಮಿತ ಸಿಜೆಐ ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಪೂರ್ಣಗೊಂಡು ಅವರು ನಿವೃತ್ತಿಯಾದ ಹಿನ್ನಲೆಯಲ್ಲಿ ಅವರ ಉತ್ತರಾಧಿಕಾರಿಯಾಗಿ ರಂಜನ್ ಗೊಗೋಯ್ ಅವರನ್ನು ಆಯ್ಕೆ ಮಾಡಲಾಗಿತ್ತು.

About the author

ಕನ್ನಡ ಟುಡೆ

Leave a Comment