ರಾಷ್ಟ್ರ ಸುದ್ದಿ

ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್: ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸಂಪುಟ ಸಮಿತಿ ಸಭೆ

ನವದೆಹಲಿ: ಪಾಕ್ ಆಕ್ರಮಿತ ಗಡಿಯ ಮಧ್ಯದಲ್ಲಿ ಭಾರತೀಯ ವಾಯುಪಡೆ ಮಂಗಳವಾರ ನಸುಕಿನ ಜಾವ ನಡೆಸಿದ ವಾಯುದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆಯಿತು.
ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸರ್ಕಾರದ ಹಿರಿಯ ನಾಯಕರು ಭಾಗವಹಿಸಿದ್ದರು. ಭಾರತೀಯ ವಾಯುಸೇನೆ ಇಂದು ನಸುಕಿನ ಜಾವ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಅಡಗುತಾಣದ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಪಾಕಿಸ್ತಾನದ ಬಾಲಕೋಟ್ ನಲ್ಲಿರುವ ಖೈಬರ್ ಪಕ್ತುಂಖ್ವ ಪ್ರಾಂತ್ಯದಲ್ಲಿ ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಮೇಲೆ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ದಾಳಿ ನಡೆಸಿವೆ.

About the author

ಕನ್ನಡ ಟುಡೆ

Leave a Comment