ದೇಶ ವಿದೇಶ

ಭಾರತ-ರಷ್ಯಾ ಶೃಂಗಸಭೆ ಇಂದು: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ ಉಭಯ ರಾಷ್ಟ್ರಗಳು

ನವದೆಹಲಿ: ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ. ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಬಳಿಕ ಪುಟಿನ್ ಅವರನ್ನು ತಮ್ಮ ನಿವಾಸದಲ್ಲಿ ಸ್ವಾಗತಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಷ್ಯಾ ಅಧ್ಯಕ್ಷರ ಜೊತೆ ಮಾತುಕತೆ ನಡೆದಿರು. ಶುಕ್ರವಾರ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ. ಆ ಪೈಕಿ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆ ಖರೀದಿ, ಕಮೋವ್ ಕಾಪ್ಟರ್ ಉತ್ಪಾದನೆಗೆ ಒಡಂಬಡಿಕೆ, ಪರಮಾಣು ಇಂಧನ ಚಾಲಿತ ಸಬ್ ಮರೀನ್ ಖರೀದಿ, ಭಾರತದ ಗಗನಯಾನಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯಲು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳಿವೆ.

About the author

ಕನ್ನಡ ಟುಡೆ

Leave a Comment