ಮಕ್ಕಳ ಕೈಗೆಟಕುವ ಬೆಸ್ಕಾಂ ಟ್ರಾನ್ಸ್ ಫಾರ್ಮರ್.!

ಆನೇಕಲ್,ಡಿ.28: ತಾಲೂಕಿನ ಬಿದರಗುಪ್ಪೆ ಗ್ರಾಮದಲ್ಲಿ ಮನೆಯ ಮುಂದೆ ಕೇವಲ ಮೂರು ಅಡಿ ಅಂತರದಲ್ಲಿ ವಿದ್ಯುತ್ ಟ್ರಾನ್ಸ್ಪಾರ್ಮರ್ ಅಳವಡಿಸಿದ್ದು, ಇದರಿಂದ ಅಲ್ಲಿನ ಜನಸಾಮಾನ್ಯರು ಭಯದಲ್ಲೆ ಕಾಲ ಕಳೆಯುವಂತಾಗಿದೆ. ಅಲ್ಲದೆ ಪ್ರತಿ ದಿನ ಮಕ್ಕಳು ಆಟವಾಡಲು ಮನೆಯಿಂದ ಹೊರ ಬರದಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಬಗ್ಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಲಾಗಿದೆ.
ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳು ಬೇಜಾವ್ದಾರಿತನ ಎತ್ತಿ ತೊರಿಸುತ್ತಿದ್ದಾರೆ ಎಂದು ಅಲ್ಲಿನ ಸಾರ್ವಜನಿಕರ ಆಕ್ರೋಶ.