ರಾಷ್ಟ್ರ

ಮದ್ಯದಿಂದ  ಮರಣದ ಬಗ್ಗೆ ಉತ್ತರ ಪ್ರದೇಶ ಸಿಎಂ ತನಿಖೆ ನಡೆಸುವಂತೆ ಆದೇಶ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮದ್ಯದಿಂದ  ಮರಣವನ್ನು  ಹೊಂದಿದ ಘಟನೆಯ ಬಗ್ಗೆ ವಿಚಾರಣೆಗೆ ಆದೇಶಿಸಿದ್ದಾರೆ. ಉತ್ತರಪ್ರದೇಶದ ಘಜಿಯಾಬಾದ್ನಲ್ಲಿ ನಕಲಿ ಮದ್ಯವನ್ನು ಸೇವಿಸಿದ ಬಳಿಕ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಜಿಯಾಬಾದ್ನ ಖೋರಾ ಪ್ರದೇಶದಲ್ಲಿ ನಡೆದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿತು. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರವು ಕಾನೂನುಬಾಹಿರ ಮದ್ಯದಲ್ಲಿ ವ್ಯವಹರಿಸುವಾಗ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡುವ ಮಸೂದೆಯನ್ನು ಅಂಗೀಕರಿಸಿದೆ ಎಂದು ತಿಳಿದುಬಂದಿದೆ.

 

About the author

ಕನ್ನಡ ಟುಡೆ

Leave a Comment