ರಾಜಕೀಯ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಗೆಲುವು ನಿಶ್ಚಿತ: ಸಿದ್ದರಾಮಯ್ಯ

ಮೈಸೂರು: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸುತ್ತದೆ. 2019ರಲ್ಲಿ ನೂರಕ್ಕೆ ನೂರರಷ್ಟು ಮೋದಿಗೆ ಸೋಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ವಿದೇಶ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಅವರು, ವಿದೇಶಕ್ಕೆ ಹೋಗೋದು ಅಫೆನ್ಸ್​ ಏನ್ರಿ? ನನಗೂ ವೈಯಕ್ತಿಕ ಬದುಕು ಇದೆ ಅಲ್ವಾ? ಎಲ್ಲವನ್ನೂ ನಿಮ್ಮ ಮುಂದೆ ಹೇಳಿ ಹೋಗಬೇಕಾ? ಸ್ನೇಹಿತರ ಮನೆಯಲ್ಲಿ ಮದುವೆ ಇದೆ. ಹೀಗಾಗಿ ವಿದೇಶಕ್ಕೆ ಹೋಗುತ್ತಿದ್ದೇನೆ ಅಷ್ಟೇ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು, ಲೋಕಸಭೆ ಚುನಾವಣೆ ಒಳಗೆ ಸಿಎಂ ಆಗದೆ ಇದ್ದರೆ ಜೀವನದಲ್ಲಿ ಮತ್ತೆ ಯಾವತ್ತೂ ಸಿಎಂ ಆಗುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ ಎಂದು ಸಿದ್ದರಾಮಯ್ಯ ಬಿಎಸ್​ವೈಗೆ ಟಾಂಗ್​ ನೀಡಿದರು.

ಬಿಜೆಪಿ ಅವರು ಉದ್ದೇಶ ಪೂರ್ವಕವಾಗಿ ಸಿಎಜಿ ವರದಿ ಬಗ್ಗೆ ತಪ್ಪು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಆಡಳಿತವಧಿಯ ಐದು ವರ್ಷಗಳಲ್ಲಿ ಹಣದ ವ್ಯತ್ಯಾಸ ಎಷ್ಟಾಗಿದೆ ಗೊತ್ತಾ? ಬಜೆಟ್ ಗಾತ್ರ ಹೆಚ್ಚಾದಂತೆ ಈ ವ್ಯತ್ಯಾಸ ಆಗುತ್ತೆ. ಅದನ್ನು ಭ್ರಷ್ಟಾಚಾರ ಅಂದರೆ ಹೇಗೆ ಹೇಳಿ? ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಜತೆಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯಲ್ಲಿ ಬಿಜೆಪಿಯ ಅಶೋಕ್ ಇದ್ದಾರೆ ಅವರೇ ಅದನ್ನು ಪರಿಶೀಲಿಸಲಿ ಬಿಡಿ ಎಂದು ತಿಳಿಸಿದರು.

About the author

ಕನ್ನಡ ಟುಡೆ

Leave a Comment