ರಾಷ್ಟ್ರ ಸುದ್ದಿ

ಮಮತಾ ಬ್ಯಾನರ್ಜಿಗೆ ಢವಢವ: ಟಿಎಂಸಿ 100 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ: ಟಿಎಂಸಿ ಶಾಸಕ ಅರ್ಜುನ್

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದ ಶಾಸಕ ಅರ್ಜುನ್ ಸಿಂಗ್ ಅವರು ಸ್ಫೋಟಕ ಹೇಳಿಕೆ ನೀಡಿದ್ದು ತೃಣಮೂಲ ಕಾಂಗ್ರೆಸ್ ಪಕ್ಷದ 100 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಹೇಳಿದ್ದು ಇದು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ವಿಧಾನಸಭೆಯಲ್ಲಿ ಕೋಲ್ಕತ್ತಾದ ದಾಮನ್ ನಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಗೆದ್ದು ಬಂದಿದ್ದ ಅರ್ಜುನ್ ಸಿಂಗ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಬೈರಕ್ಷುರ್ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅರ್ಜುನ್ ಸಿಂಗ್ ಲೋಕಸಭಾ ಚುನಾವಣೆಗೂ ಮೊದಲು ಟಿಎಂಸಿಯ ಕೆಲ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ. ಇನ್ನು ಕೆಲವರು ಚುನಾವಣೆ ಬಳಿಕ ಕಮಲ ಪಾಳಯಕ್ಕೆ ಬರಲಿದ್ದಾರೆ. ಈಗಾಗಲೇ ಹಲವು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರರು, ಅರ್ಜುನ್ ಸಿಂಗ್ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ನಮ್ಮ ಶಾಸಕರು ಅವರನ್ನು ಅನುಕರಿಸುತ್ತಿರುವುದನ್ನು ನೀವು ನೋಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

About the author

ಕನ್ನಡ ಟುಡೆ

Leave a Comment