ರಾಷ್ಟ್ರ

ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಓವೈಸಿ

ಹೈದರಾಬಾದ್: ಅಸನ್ ಸೋಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿರುದ್ಧ ಆಲ್ ಇಂಡಿಯಾ ಮ್ಯಾಜೀಸ್  ಈ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ  ಮಾತ್ತಡಿದ್ದಾರೆ.

ಭಾನುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ  ಪಶ್ಚಿಮಂ ಬಂಗಾಳ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ  ಹಿಂಸಾಚಾರ ನಡೆದ ಪ್ರದೇಶದಲ್ಲಿ ಹಿಂದೂಗಳ ಪ್ರಾಬಲ್ಯವಿರುವ ಸ್ಥಳಗಳಿಗೆ ಮಾತ್ರ ಭೇಟಿ ನೀಡಿದ್ದಾರೆ.  ಆದರೆ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್ ಮನೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಕಡೇ ಪಕ್ಷ ನೀವು ಇಮಾಮ್ ಮನೆಗೆ ಭೇಟಿ ನೀಡಿ ಅವರಿಗೆ ಸಾಂತ್ವಾನ ಹೇಳಬೇಕಿತ್ತು ಗಲಭೆ ಪೀಡಿತ ಪ್ರತಿಯೊಂದು ಸ್ಥಳಗಳಿಗೂ ಭೇಟಿ ನೀಡಬೇಕಿತ್ತು ಇದು ನಿಮ್ಮ ಸಾಂವಿಧಾನಿಕ ಅಧಿಕಾರ ಹಾಗೂ ಜವಾಬ್ದಾರಿಯಾಗಿತ್ತು ಎಂದು ಹೇಳಿದ್ದಾರೆ. ಇನ್ನೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಾತ್ಯಾತೀತ ಸರ್ಕಾರದಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಿದೆ ಎಂದು ದೂರಿದ್ದಾರೆ.

 

About the author

ಕನ್ನಡ ಟುಡೆ

Leave a Comment