ರಾಜ್ಯ ಸುದ್ದಿ

ಮಹಾದಾಯಿಯ ಹನಿ ನೀರನ್ನೂ ಸಮುದ್ರಕ್ಕೆ ಬಿಡಲ್ಲ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ /ಬೆಳಗಾವಿ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿ ಮಹಾದಾಯಿ ಉಗಮಸ್ಥಾನ ವೀಕ್ಷಿಸಿದರು. ಭೇಟಿಗೂ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ಮಹಾದಾಯಿ ವಿಚಾರದಲ್ಲಿ ನಮಗೆ ಅನ್ಯಾಯವಾಗಿದ್ದು, ತೀರ್ಪು ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ನಮ್ಮ ಪಾಲಿನ ನೀರು ಪಡೆಯಲು ಕಾನೂನಾತ್ಮಕ ಅಭಿಪ್ರಾಯ ಕೇಳಿದ್ದೇವೆ. ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ . ರಾಜ್ಯದ ಒಂದು ಹನಿ ನೀರನ್ನೂ ಸಮುದ್ರಕ್ಕೆ ಸೇರಲು ಬಿಡುವುದಿಲ್ಲ ಎಂದರು. ಇದೇ ವೇಳೆ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಲ್‌ ಇಸ್‌ ವೆಲ್‌ ಎಂದರು. ಸಚಿವ ಡಿಕೆಶಿ ಅವರೊಂದಿಗೆ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್‌ , ಅಂಜಲಿ ನಿಂಬಾಳ್ಕರ್‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

 

About the author

ಕನ್ನಡ ಟುಡೆ

Leave a Comment