ಕ್ರೀಡೆ

ಮಹಿಳಾ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಗೆದ್ದ ಭಾರತ

ಪ್ರೊವಿಡೆನ್ಸ್‌: ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತೀಯ ವನಿತೆಯರು ಐರ್ಲೆಂಡ್ ವಿರುದ್ಧ 52 ರನ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದಾರೆ.
ಪ್ರೊವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರು  ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ, ಆರಂಭಿಕ ಆಟಗಾರ್ತಿ ಮಿಥಾಲಿ ರಾಜ್ ಅವರ ಅರ್ಧ ಶತಕದ ನೆರವಿನೊಂದಿಗೆ ನಿಗದಿತ 20 ಓರವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಸೇರಿಸಿತು. ಗೆಲುವಿಗೆ 146 ರನ್ ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 93 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತೀಯ ವನಿತೆಯರು ಯಶಸ್ವಿಯಾದರು. ಭಾರತದ ಪರ ಮಿಥಾಲಿ ರಾಜ್ 51, ಸ್ಮೃತಿ ಮಂಧಾನ 33, ಜೆಮೀಮಾ ರೋಡ್ರಿಗಸ್ 18 ಹಾಗೂ ದೀಪ್ತಿ ಶರ್ಮಾ 11 ರನ್ ಗಳಿಸಿದರು.
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿದ್ದ ಭಾರತ, ಎರಡನೇ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿತ್ತು. ಭಾರತೀಯ ವನಿತೆಯರು ಇಂದು ಐರ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment