ಕ್ರೀಡೆ

ಮಹಿಳೆಯರ ಟಿ20 ತ್ರಿಕೋನ ಸರಣಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮುಂಬೈ: ಟಿ20 ತ್ರಿಕೋನ ಸರಣಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಹಿಳೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಬರ್ಜರಿ ಜಯ ಸಾದಿಸಿದೆ. ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 108 ರನ್ ಗಳ ಗುರಿಯನ್ನು ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 15.4 ಓವರ್ ನಲ್ಲಿಯೇ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ವನಿತೆಯರ ತಂಡ ಭಾರತದ ಸ್ಪಿನ್ನರ್ ಗಳ ದಾಳಿಗೆ ತತ್ತರಿಸಿ 18.5 ಓವರ್ ನಲ್ಲಿ 107 ರನ್ ಗಳಿಗೆ ಆಲೌಟ್ ಆದರು. ಇಂಗ್ಲೆಂಡ್ ಪರ ಆರಂಭಿಕ ಆಟಗಾರ್ತಿ ಡೇನಿಯಲ್ಲೇ ವ್ಯಾಟ್ ಗಳಿಸಿದ 31 ರನ್ ಗಳ ಗರಿಷ್ಟ ವೈಯುಕ್ತಿಕ ರನ್ ಗಳಿಕೆಯಾಗಿತ್ತು. ಭಾರತದ ಪರ ಅನುಜಾ ಪಾಟಿಲ್ 3 ವಿಕೆಟ್ ಕಬಳಿಸಿ ಯಶಸ್ವೀ ಬೌಲರ್ ಎನಿಸಿಕೊಂಡರೆ, ರಾಧಾ ಯಾದವ್, ದೀಪ್ತಿ ಶರ್ಮಾ ಮತ್ತು ಪೂನಂ ಯಾದವ್ ತಲಾ 2 ವಿಕೆಟ್ ಗಳಿಸಿದರು.

ಅಜೇಯ ಆಟವಾಡಿದ ಇಬ್ಬರೂ ಭಾರತಕ್ಕೆ 8 ವಿಕೆಟ್ ಗಳ ಜಯ ತಂದಿತ್ತರು. ಹರ್ಮನ್ ಪ್ರೀತ್ ಕೌರ್ ಅಜೇಯ 20 ರನ್ ಗಳಿಸಿದರೆ, ಸ್ಮೃತಿ ಮಂದಾನಾ ಅಜೇಯ 62 ರನ್ ಗಳಿಸಿದರು.

About the author

ಕನ್ನಡ ಟುಡೆ

Leave a Comment