ರಾಷ್ಟ್ರ ಸುದ್ದಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 101ನೇ ಜನ್ಮದಿನ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ರಾಷ್ಟ್ರ ನಾಯಕರ ಸ್ಮರಣೆ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ 101ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಸೋಮವಾರ ಗೌರವ ನಮನ ಸಲ್ಲಿಸಿದ್ದಾರೆ.ಇಂದಿರಾ ಗಾಂಧಿಯವರ ಜನ್ಮ ದಿನದ ಸಂದರ್ಭದಲ್ಲಿ ಅವರಿಗೆ ಗೌರವ ನಮನಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಕೂಡ ಇಂದಿರಾ ಗಾಂಧಿಯವರ ಸಮಾಧಿ ಸ್ಥಳ ದೆಹಲಿಯ ಶಕ್ತಿ ಸ್ಥಳಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ರಾಜಸ್ತಾನದ ಕಾಂಗ್ರೆಸ್ ನಾಯಕರು, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಕೂಡ ಇಂದಿರಾ ಗಾಂಧಿಯವರನ್ನು ಸ್ಮರಿಸಿದ್ದಾರೆ. ಭಾರತದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ನವೆಂಬರ್ 19, 1917ರಲ್ಲಿ ಉತ್ತರ ಪ್ರದೇಶದಲ್ಲಿ ಜನಿಸಿದ್ದರು.

About the author

ಕನ್ನಡ ಟುಡೆ

Leave a Comment