ಸುದ್ದಿ

ಮಾಜಿ ಸಚಿವ ಖಮರುಲ್ ಇಸ್ಲಾಂ ಇನ್ನಿಲ್ಲ!

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗು ಮಾಜಿ ಸಚಿವ ಖಮರುಲ್ ಇಸ್ಲಾಂ (69) ತೀವ್ರ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

ಹೃದಯ ಸಂಬಂಧ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆಯಲ್ಲಿ ನಿಧನರಾಗಿರುವ ಖಮರುಲ್ ಇಸ್ಲಾಂ ಅವರ ಪಾರ್ಥೀವ ಶರೀರವನ್ನು ಆರ್.ಟಿ.ನಗರದ ನಿವಾಸಕ್ಕೆ ತರಲಿದ್ದು, ನಂತರ ಕೆಪಿಸಿಸಿ ಕಚೇರಿಯಲ್ಲಿಯೂ ಕೆಲಕಾಲ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

1974 ರಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಖಮರುಲ್ ಇಸ್ಲಾಂ, ಮೊದಲ ಬಾರಿಯೇ ಮುಸ್ಲಿಂ ಲೀಗ್ ಪಕ್ಷದಿಂದ ಆಯ್ಕೆಯಾಗಿದ್ದರು. ಮೂರು ಬಾರಿ ಮುಸ್ಲಿಂ ಲೀಗ್ ಮತ್ತೆ ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಸೇರಿ ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1999 ರಲ್ಲಿ ಎಸ್.ಎಂ. ಕೃಷ್ಣ ಸಚಿವ ಸಂಪುಟದಲ್ಲಿ ಮೊದಲ ಬಾರಿ ಸಚಿವರಾಗಿದ್ದ ಖಮರುಲ್ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು.
ಕೃಷ್ಣ ಸಂಪುಟದಲ್ಲಿ ಕಾರ್ಮಿಕ, ವಸತಿ ಖಾತೆ ನಿರ್ವಹಿಸಿದ್ದ ಅವರು ಸಿದ್ದು ಸಂಪುಟದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ, ವಕ್ಫ್ ಖಾತೆ ಸಚಿವರಾಗಿದ್ದರು.

About the author

ಕನ್ನಡ ಟುಡೆ

Leave a Comment