ರಾಷ್ಟ್ರ ಸುದ್ದಿ

ಮಾತನಾಡಲು ಮನಮೋಹನ್ ಸಿಂಗ್ ಅವರಿಗೆ ಬೇರೆಯವರ ಸ್ಕ್ರಿಪ್ಟ್ ಬೇಕು, ಮೋದಿಗೆ ಬೇಕಿಲ್ಲ: ಅಬ್ಬಾಸ್ ನಖ್ವಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾತನಾಡಲು ಯಾವುದೇ ಸ್ಕ್ರಿಪ್ಟ್ ಬೇಕಾಗಿಲ್ಲ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಲು ಯಾರೋ ಬರೆದು ಕೊಡಬೇಕು, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಸ್ಕ್ರಿಪ್ಟ್ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ. ಅವರು ಪ್ರಧಾನ ಮಂತ್ರಿಯಾಗಿದ್ದಾಗಲೂ ಬೇರೆಯವರು ಬರೆದುಕೊಟ್ಟಿದ್ದನ್ನು ಮಾತಾಡುತ್ತಿದ್ದರೂ, ಈಗಲು ಅದನ್ನೇ ಮಾಡುತ್ತಿದ್ದಾರೆ ಎಂದು ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು.
ಚೇನ್‌ಜಿಂಗ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಅವರು ಎಂತಹ ಪರಿಸ್ಥಿತಿಯಲ್ಲೂ ನಾನು ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿರಲಿಲ್ಲ. ಆದರೆ ಇಂದಿನ ಪ್ರಧಾನಿ ಮಾಧ್ಯಮಗಳ ಮುಂದೆ ಮಾತನಾಡಲು ಹೆದರುತ್ತಿದ್ದಾರೆ ಎಂದು ಹೇಳಿದ್ದರು.

About the author

ಕನ್ನಡ ಟುಡೆ

Leave a Comment