ರಾಜ್ಯ ಸುದ್ದಿ

ಚುನಾವಣಾ ಕದನ: ಮಾಧ್ಯಮಗಳ ಮೇಲೆ ಜೆಡಿಎಸ್‍ ಗೂಂಡಾಗಿರಿ; ಚುನಾವಣಾಧಿಕಾರಿಗೆ ದೂರು

ಮಂಡ್ಯ: ಚುನಾವಣಾ ಕದನ ಏರ್ಪಟ್ಟಿರುವ ಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‍ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.

ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್‍ನಲ್ಲಿ ಮುಖ್ಯಮಂತ್ರಿ ಎಚ್‍.ಡಿ.ಕುಮಾರ ಸ್ವಾಮಿ ಅವರ ಪ್ರಚೋದಿತ ಹೇಳಿಕೆ ಹಿನ್ನೆಲೆಯಲ್ಲಿ ಜೆಡಿಎಸ್‍ ಕಾರ್ಯಕರ್ತರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಮುಂದಾಗಿ, ಮಾಧ್ಯಮಗಳ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಇಂತಹ ಹಲವಾರು ಘಟನೆಗಳು ಮರುಕಳಿಸುತ್ತಲೇ ಇದ್ದು, ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವುದು ಹಾಗೂ ಗೂಂಡಾಗಿರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಪತ್ರಕರ್ತರ ಒಕ್ಕೂಟ ದೂರಿನಲ್ಲಿ ತಿಳಿಸಿದೆ.

About the author

ಕನ್ನಡ ಟುಡೆ

Leave a Comment