ರಾಜ್ಯ ಸುದ್ದಿ

ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ತಪ್ಪೋಪ್ಪಿಕೊಂಡ ಮಹಿಳೆ

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 15 ಜನರು ಮೃತಪಟ್ಟಿದ್ದು ಇದೀಗ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ಮಹಿಳೆಯೊಬ್ಬಳು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ದೇವಸ್ಥಾನದ ವ್ಯವಸ್ಥಾಪಕ ಮಾದೇಶ್ ಎಂಬುವನ ಪತ್ನಿ ಅಂಬಿಕಾ ಎಂಬುವರು ನಾನೇ ಪ್ರಸಾದಕ್ಕೆ ವಿಷ ಹಾಕಿದ್ದು ಎಂದು ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಎರಡು ದಿನಗಳಿಂದ ಅಂಬಿಕಾ ಸೇರಿದಂತೆ 15 ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದು ಈ ವೇಳೆ ಅಂಬಿಕಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ ಸೂಚನೆ ಮೇರೆಗೆ ಪ್ರಸಾದದಲ್ಲಿ ವಿಷ ಹಾಕಿದ್ದೇನೆ ಎಂದು ಹೇಳಿದ್ದಾಳೆಂದು ತಿಳಿದುಬಂದಿದೆ. ಇನ್ನು ಪ್ರಕರಣ ಸಂಬಂಧ ಇಮ್ಮಡಿ ಮಹದೇವಸ್ವಾಮಿ, ವ್ಯವಸ್ಥಾಪಕ ಮಾದೇಶ್, ಮಾದೇಶನ ಪತ್ನಿ ಅಂಬಿಕಾ, ಪೂಜಾರಿ ಮಹದೇವ ಮತ್ತಿತ್ತರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.

About the author

ಕನ್ನಡ ಟುಡೆ

Leave a Comment