ರಾಜಕೀಯ

ಮಾರ್ಚ್ 6ರಂದು ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ರೆಬೆಲ್ ಮುಖಂಡ ಉಮೇಶ್ ಜಾಧವ್ ಇದೇ ಮಾರ್ಚ್ 6ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಅವರ ಸಹೋದರ ಹೇಳಿಕೆ ನೀಡಿದ್ದು, ಉಮೇಶ್ ಜಾಧವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಾರ್ಚ್ 6, ಬುಧವಾರದಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಇದೇ ಬುಧವಾರ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸಮಾವೇಶ ನಡೆಯಲಿದ್ದು, ಈ ವೇಳೆ ಅಧಿಕೃತವಾಗಿ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಲೋಕಸಭಾ ಕಾಂಗ್ರೆಸ್ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಬಾರಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಜಾಧವ್ ಅವರು ಖರ್ಗೆ ವಿರುದ್ಧ ಕಲಬರಗಿಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಇನ್ನು ಕಾಂಗ್ರೆಸ್ ಪಕ್ಷದ ಬಂಡಾಯ ನಾಯಕ ಉಮೇಶ್ ಜಾಧವ್ ರಾಜಿನಾಮೆ ವಿಚಾರ ಸಮನ್ವಯ ಸಮಿತಿಯಲ್ಲಿ ಕೂಡ ಚರ್ಚೆಯಾಗಿದ್ದು, ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತಿದೆ.

About the author

ಕನ್ನಡ ಟುಡೆ

Leave a Comment