ರಾಜ್ಯ ಸುದ್ದಿ

ಮಾ. 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದು, 2019ರ ಮಾ. 21ರಿಂದ ಏಪ್ರಿಲ್‌ 4ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಅಭ್ಯರ್ಥಿಗಳು ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 31ರಿಂದ ನವೆಂಬರ್‌ 29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು-3, ಇವರಿಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

ವೇಳಾಪಟ್ಟಿ: ಮಾ. 21: ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ

About the author

ಕನ್ನಡ ಟುಡೆ

Leave a Comment