ರಾಜಕೀಯ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿದೆ: ಸಚಿವ ಶಿವಕುಮಾರ್

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಹಿರಿಯ ನಾಯಕ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ, ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್  ಒಟ್ಟಾಗಿ ಸ್ಪರ್ಧಿಸಲಿವೆ ಎಂದು ತಿಳಿಸಿದ್ದಾರೆ. ಜೆಡಿಎಸ್ 12 ಲೋಕಸಭೆ ಕ್ಷೇತ್ರ ನೀಡುವಂತೆ ಬೇಡಿಕೆ ಇಟ್ಟಿದೆಯಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ನಾನು ಜೆಡಿಎಸ್ ವಕ್ತಾರನಲ್ಲ, ಜೆಡಿಎಸ್ ಬಯಸುವುದು ತಪ್ಪೇ?  ರಾಜಕೀಯವಾಗಿ ಪಕ್ಷದ ಕಾರ್ಯಕರ್ತರಲ್ಲಿ ಗೆಲ್ಲುವ ಉತ್ಸಾಹ ಆತ್ಮ ವಿಶ್ವಾಸದ ಸಂದೇಶ ರವಾನಿಸುವುದು ತಪ್ಪೇ ಎಂದು ಪ್ರಶ್ನಿಸಿದ್ದಾರೆ. ಸೀಟು ಹಂಚಿಕೆ ಸಂಬಂಧ ಎರಡು ಪಕ್ಷಗಳ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ,. ಆದರೆ ಎರಡು ಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸುವ ವಿಶ್ವಾಸದಲ್ಲಿದ್ದಾರೆ.

About the author

ಕನ್ನಡ ಟುಡೆ

Leave a Comment